Radius: Off
Radius:
km Set radius for geolocation
Search

ಏ.30ಕ್ಕೆ ದ್ವಿತೀಯ ಪಿಯು ಫಲಿತಾಂಶ

ಬೆಂಗಳೂರು: 2017-18ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏ. 30 ರಂದು ಪ್ರಕಟಗೊಳ್ಳಲಿದೆ ಎಂದು ಪದವಿಪೂರ್ವ ಪರೀಕ್ಷಾ ಮಂಡಳಿ ಪ್ರಕಟಣೆ ತಿಳಿಸಿದೆ.
30 ರಂದು ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದ್ದು ಮೇ 1 ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶ ಘೋಷಣೆಯಾಗಲಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://kseeb.kar.nic.in/ನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಕಟಣೆ ಹೇಳಿದೆ.
ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆಯಲ್ಲಿ 4,725 ಕಾಲೇಜುಗಳ ಸುಮಾರು 6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ರಾಜ್ಯದ 2817 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.

Leave a Reply

Your email address will not be published. Required fields are marked