ಬೇಡಿಕೆ ಈಡೇರದಿದ್ದರೆ ಮೌಲ್ಯಮಾಪನ ಬಹಿಷ್ಕಾರ

ಬೇಡಿಕೆ ಈಡೇರದಿದ್ದರೆ ಮೌಲ್ಯಮಾಪನ ಬಹಿಷ್ಕಾರ

ಬೇಡಿಕೆ ಈಡೇರದಿದ್ದರೆ ಮೌಲ್ಯಮಾಪನ ಬಹಿಷ್ಕಾರ

ರಾಜ್ಯದ 412 ಸರಕಾರಿ ಪದವಿ ಕಾಲೇಜುಗಳಲ್ಲಿ 13500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕನಿಷ್ಠ ವೇತನ ಪಡೆದು ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ರಾಜ್ಯದಲ್ಲಿ ಪ್ರತಿವರ್ಷ 3 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಅತಿಥಿ ಉಪನ್ಯಾಸಕರ ಬದುಕು ಅತಂತ್ರವಾಗಿದೆ       

– ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮಿತಿ ರಾಜ್ಯಾಧಕ್ಷ ಡಾ.ಎಚ್‌.ಸೋಮಶೇಖರ್‌ ಶಿವಮೊಗ್ಗಿ 

ಶಿವಮೊಗ್ಗ: ಅತಿಥಿ ಉಪನ್ಯಾಸಕರು ಸಮಸ್ಯೆಯಲ್ಲಿಯೇ ಕೈ ತೊಳೆಯುತ್ತಿದ್ದರೂ ಇದುವರೆಗೆ ಸರಕಾರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬೇಡಿಕೆಗಳು ಶೀಘ್ರವೇ ಈಡೇರದಿದ್ದರೆ ಮೌಲ್ಯಮಾಪನವನ್ನು ಬಹಿಷ್ಕರಿಸಲಾಗುವುದು ಎಂದು ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಸಮಾವೇಶದಲ್ಲಿ ತೀರ್ಮಾನ ಕೈಗೊಂಡರು.

ನಗರದ ಅಂಬೇಡ್ಕರ್‌ ಭವನದಲ್ಲಿ ಮಂಗಳವಾರ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮಿತಿಯಿಂದ ಏರ್ಪಡಿಸಿದ್ದ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ವೃತ್ತಿ ಸಮಸ್ಯೆಗಳ ಪರಿಹಾರದ ಹಕ್ಕೋತ್ತಾಯಕ್ಕಾಗಿ ರಾಜ್ಯಮಟ್ಟದ ಸಮಾವೇಶದಲ್ಲಿ ಸಮಿತಿ ರಾಜ್ಯಾಧಕ್ಷ ಡಾ.ಎಚ್‌.ಸೋಮಶೇಖರ್‌ ಶಿವಮೊಗ್ಗಿ ಮಾತನಾಡಿ, ರಾಜ್ಯದ 412 ಸರಕಾರಿ ಪದವಿ ಕಾಲೇಜುಗಳಲ್ಲಿ 13500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕನಿಷ್ಠ ವೇತನ ಪಡೆದು ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ರಾಜ್ಯದಲ್ಲಿ ಪ್ರತಿವರ್ಷ 3 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಅತಿಥಿ ಉಪನ್ಯಾಸಕರ ಬದುಕು ಅತಂತ್ರವಾಗಿದೆ ಎಂದರು.

ಯುಜಿಸಿ ಮತ್ತು 7ನೇ ವೇತನ ಆಯೋಗದ ಶಿಫಾರಸಿನಂತೆ ಪ್ರತಿ ಗಂಟೆಗೆ 1500 ರೂ.ನಂತೆ ಕನಿಷ್ಟ 50 ಸಾವಿರ ವೇತನ ಪ್ರತಿ ತಿಂಗಳು ನೀಡಬೇಕು. ದುರಂತವೆಂದರೆ 9ರಿಂದ 10ತಿಂಗಳ ಮಾತ್ರ ಗೌರವ ಧನ ನೀಡಿ ಪರೀಕ್ಷಾ ಕೊಠಡಿ ಮೇಲ್ವಿಚಾರಣೆ, ಮೌಲ್ಯಮಾಪನ, ಗ್ರಂಥಾಲಯ ಮತ್ತು ಪೀಠೋಪಕರಣದ ವಾರ್ಷಿಕ ತಪಾಸಣೆಗೆ ಕರ್ತವ್ಯದಿಂದ ಬಿಡುಗಡೆ ಮಾಡಿದ ನಂತರವೂ ಕಾಲೇಜು ಶಿಕ್ಷಣ ಇಲಾಖೆ ಬಳಸಿಕೊಳ್ಳುತ್ತದೆ ಎಂದರು.

ಶೇ.75 ಭಾಗದ ಅತಿಥಿ ಉಪನ್ಯಾಸಕರ ಸೇವೆಯಲ್ಲಿ ಅವಲಿಂಬಿಸಿರುವ ಕಾಲೇಜು ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರ ಸೇವೆಗೆ ತಕ್ಕ ವೇತನ ನಿಗಧಿಪಡಿಸಬೇಕು. ವರ್ಷದ 12 ತಿಂಗಳು ವೇತನ ನೀಡಬೇಕು ಹಾಗೂ ಸೇವಾ ಭದ್ರತೆ ಒದಗಿಸಬೇಕು ಎಂಬ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರು ಈ ಬಾರಿ ಪರೀಕ್ಷಾ ಕೊಠಡಿ ಮೇಲ್ವಿಚಾರಣೆ, ಮೌಲ್ಯಮಾಪನ, ಗ್ರಂಥಾಲಯ ಮತ್ತು ಪೀಠೋಪಕರಣದ ವಾರ್ಷಿಕ ತಪಾಸಣೆಯನ್ನು ಬಹಿಷ್ಕರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು. ಸಮಾವೇಶದಲ್ಲಿ ಸಮಿತಿಯ ರಾಜ್ಯ ಕಾರ್ಯದರ್ಶಿ ನರಹರಿ, ಪ್ರಮುಖರಾದ ಅರುಣ್‌ಕುಮಾರ್‌, ಕೆ.ರಾಜೇಶ್‌ಕುಮಾರ್‌, ಡಾ.ಶೀಲಾ, ಸರ್ವಜ್ಞಮೂರ್ತಿ, ಸತೀಶ್‌ ಮತ್ತಿತರರು ಇದ್ದರು.

Leave a Reply

Your email address will not be published. Required fields are marked