Radius: Off
Radius:
km Set radius for geolocation
Search

19ಕ್ಕೆ ಬಿಎಸ್‌ವೈ ನಾಮಪತ್ರ

ಶಿಕಾರಿಪುರ: ಬಿಜೆಪಿ ರಾಜ್ಯಾಧ್ಯಕ್ಷ , ಸಂಸದ ಬಿ.ಎಸ್‌.ಯಡಿಯೂರಪ್ಪ ಅವರು ವಿಧಾನಸಭಾ ಚುನಾವಣೆಗೆ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಏಪ್ರಿಲ್‌ 19ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಕ್ಷೇತ್ರ ದೇವತೆ ಶ್ರೀಹುಚ್ಚುರಾಯಸ್ವಾಮಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಲಿದ್ದಾರೆ. ನಂತರ ಪಟ್ಟಣದ ಹೊಸ ಸಂತೆ ಮೈದಾನದಲ್ಲಿ ಅಂದು ಬೆಳಗ್ಗೆ 11ಕ್ಕೆ ಬಹಿರಂಗ ಸಭೆ ನಡೆಯಲಿದೆ. ಸಭೆಯಲ್ಲಿ ಕೇಂದ್ರ ಸಚಿವ ಅನಂತಕುಮಾರ್‌, ಬಳ್ಳಾರಿ ಸಂಸದ ಶ್ರೀರಾಮುಲು, ಮಾಜಿ ಕೇಂದ್ರ ಸಚಿವ ಜಿ.ಎಂ.ಸಿದ್ದೇಶ್‌, ಮಾಜಿ ಸಚಿವ ಗೋವಿಂದ ಕಾರಜೋಳ, ಮುಖಂಡರಾದ ಎಸ್‌.ರುದ್ರೇಗೌಡ, ಸುನಿಲ್‌ ವಲ್ಯಾಪುರೆ, ಆಯನೂರು ಮಂಜುನಾಥ್‌, ಬಿ.ವೈ.ರಾಘವೇಂದ್ರ, ಪಿ.ರಾಜೀವ್‌, ಕೆ.ಶೇಖರಪ್ಪ, ಎ.ಎಸ್‌.ಪದ್ಮನಾಭಭಟ್‌, ಕೆ.ರೇವಣಪ್ಪ, ಟಿ.ರಾಮಾನಾಯ್ಕ, ಸಣ್ಣಹನುಮಂತಪ್ಪ ಮತ್ತಿತರರು ಹಾಜರಿದ್ದು ಮತಯಾಚನೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked