ಹಿಂದೂ, ಮುಸ್ಲಿಂ ಸಹಬಾಳ್ವೆಗೆ ಧಕ್ಕೆ

ಶಿವಮೊಗ್ಗ: ದೇಶದ ಸದ್ಯದ ಪರಿಸ್ಥಿತಿಯಲ್ಲಿ ಹಿಂದೂ, ಮುಸ್ಲಿಮರು ಒಟ್ಟಿಗೆ ಬಾಳಲು ಸಾಧ್ಯವಿಲ್ಲ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಕಳವಳ ವ್ಯಕ್ತಪಡಿಸಿದರು. ಎನ್‌ಟಿ ರಸ್ತೆಯಲ್ಲಿ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಪ್ರಸನ್ನಕುಮಾರ್ ಪರ ಮತಯಾಚಿಸಿ ಅವರು ಮಾತನಾಡಿದರು. ಹಿಂದೆ ಹಿಂದೂ, ಮುಸ್ಲಿಮರು ಒಂದೇ ಓಣಿಯಲ್ಲಿ ಒಟ್ಟಿಗೆ ನೆಮ್ಮದಿಯಿಂದ ಬದುಕುತ್ತಿದ್ದರು. ಸಹೋದರರಂತೆ ಇರುತ್ತಿದ್ದರು. ಈಗ ಅಂತಹ ವಾತಾವರಣ ಇಲ್ಲದಂತೆ ಮಾಡಲಾಗಿದೆ. ಅಧಿಕಾರಕ್ಕಾಗಿ ಜಾತಿ, ಧರ್ಮದ ರಾಜಕೀಯ ಮಾಡಲಾಗುತ್ತಿದೆ. ಜನರ ನಡುವೆ ದೊಡ್ಡ ಕಂದಕ ನಿರ್ಮಿಸಲಾಗಿದೆ […]