ಅನುಮತಿಗೆ ವಿಶೇಷ ಕೌಂಟರ್ ಆರಂಭ

ಸಾಗರ: ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳಿಗೆ 48 ಗಂಟೆ ಮುಂಚಿತವಾಗಿ ಅನುಮತಿ ಪಡೆಯುವುದು ಕಡ್ಡಾಯ. ಈ ಹಿನ್ನೆಲೆಯಲ್ಲಿ ವಿಶೇಷ ಕೌಂಟರ್ ತೆರೆಯಲಾಗಿದ್ದು ಏಕಗವಾಕ್ಷಿ ಮೂಲಕ ವಿವರ ಪಡೆಯಹುದು ಎಂದು ಉಪವಿಭಾಗಾಧಿಕಾರಿ ಎಚ್.ವಿ. ದರ್ಶನ್ ಹೇಳಿದರು. ಕಚೇರಿಯಲ್ಲಿ ಈ ಕುರಿತು ಗುರುವಾರ ಮಾಹಿತಿ ನೀಡಿದ ಅವರು, ಚುನಾವಣೆ ದಿನಾಂಕ ಘೊಷಣೆಯಾದ ದಿನದಿಂದ ನೀತಿಸಂಹಿತೆ ಜಾರಿಯಾಗಿದೆ. ಮದುವೆ, ಇತರೆ ಧಾರ್ವಿುಕ ಕಾರ್ಯಕ್ರಮಗಳಿಗೆ ಅನುಮತಿ ಪಡೆಯಬೇಕಾದ ಅವಶ್ಯಕತೆ ಇಲ್ಲ. ಆದರೆ ಕಾರ್ಯಕ್ರಮದ ಬಗ್ಗೆ ವಿವರ ನೀಡುವುದು ಒಳಿತು ಎಂದರು. ಆಯಕಟ್ಟಿನ ಜಾಗಗಳಲ್ಲಿ […]

ಮಂಗನಕಾಯಿಲೆಗೆ ಮತ್ತೊಂದು ಬಲಿ

ತೀರ್ಥಹಳ್ಳಿ: ಮಂಗನ ಕಾಯಿಲೆಯಿಂದ ತಾಲೂಕಿನಲ್ಲಿ ಎರಡನೇ ಸಾವು ಸಂಭವಿಸಿದೆ. ಕೆಎಫ್​ಡಿ ಸೋಂಕಿನಿಂದ ಬಳಲುತ್ತಿದ್ದ ಕುಕ್ಕೆ ಬಾಂಡ್ಯ ಗ್ರಾಪಂ ವ್ಯಾಪ್ತಿಯ ರಾಜು (55) ಎಂಬುವವರು ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ರಾಜು ಅವರು ಕಳೆದ ಒಂದು ತಿಂಗಳಿನಿಂದ ಜ್ವರದಿಂದ ನರಳುತ್ತಿದ್ದರು. ಇಲ್ಲಿನ ಜೆಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರನ್ನು ಫೆಬ್ರವರಿ 12ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಕೂಡ ಮಂಡಗದ್ದೆಯ ಒಬ್ಬರಿಗೆ ಕೆಎಫ್​ಡಿ ಸೋಂಕು ತಗುಲಿರುವುದು ಧೃಡಪಟ್ಟಿದ್ದು ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು ಮಂಡಗದ್ದೆ ಸಮೀಪದ ತೋಟದಕೊಪ್ಪದ […]

ಕೃಷಿ, ತೋಟಗಾರಿಕೆ ವಿವಿ ಸುಗ್ಗಿ ಸಂಭ್ರಮ

ಶಿವಮೊಗ್ಗ: ಶಿವಮೊಗ್ಗ ಕೃಷಿ ಹಾಗೂ ತೋಟಗಾರಿಕೆ ವಿವಿಯ 4ನೇ ಘಟಿಕೋತ್ಸವ ‘ಸುಗ್ಗಿ ಸಂಭ್ರಮ-4’ ಮಾ.9ರ ಬೆಳಗ್ಗೆ 11ಕ್ಕೆ ವಿವಿ ಆವರಣದಲ್ಲಿ ನಡೆಯಲಿದೆ ಎಂದು ವಿವಿ ಕುಲಪತಿ ಡಾ. ಎಂ.ಕೆ.ನಾಯ್್ಕ ತಿಳಿಸಿದರು. ವಿವಿಯ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಿ.ಆರ್.ವಾಲಾ ಪದವಿ ಪ್ರದಾನ ಮಾಡಲಿದ್ದಾರೆ. ಸಹ ಕುಲಾಧಿಪತಿ, ಕೃಷಿ ಸಚಿವ ಶಿವಶಂಕರ ರೆಡ್ಡಿ ಉಪಸ್ಥಿತರಿರಲಿದ್ದಾರೆ. ಭಾರತೀಯ ಕೃಷಿ ಅನುಸಂಧಾನ ಪರಿಷತ್​ನ ಕಾರ್ಯದರ್ಶಿ ಡಾ.ತ್ರಿಲೋಚನ ಮಹಾಪಾತ್ರ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. 344 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ:2018-19ನೇ […]

216 ಗ್ರಾಮದಲ್ಲಿ ಕುಡಿವ ನೀರಿಗೆ ತೊಂದರೆ ಸಾಧ್ಯತೆ

ಶಿವಮೊಗ್ಗ: ಬೇಸಿಗೆಯಲ್ಲಿ ಜಿಲ್ಲೆಯ 216 ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗಬಹುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಚಕ್ರವರ್ತಿ ಮೋಹನ್ ತಿಳಿಸಿದರು. ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಬೇಸಿಗೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಯಾವುದೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪ್ರಸ್ತುತ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸುತ್ತಿಲ್ಲ. ಬೇಸಿಗೆಯಲ್ಲಿ ನೀರಿನ ತೊಂದರೆ ಉಂಟಾಗುವ ಗ್ರಾಮಗಳನ್ನು ಗುರುತಿಸಲಾಗಿದೆ. ಅಂತಹ […]

ಜನಶತಾಬ್ದಿ ರೈಲು 6 ದಿನಗಳ ಸಂಚಾರಕ್ಕೆ ಚಾಲನೆ

ಶಿವಮೊಗ್ಗ: ಶಿವಮೊಗ್ಗ-ಯಶವಂತಪುರ ನಡುವೆ ವಾರದಲ್ಲಿ 6 ದಿನಗಳ ಸಂಚಾರ ಆರಂಭಿಸಿದ ಜನಶತಾಬ್ದಿ ಎಕ್ಸ್​ಪ್ರೆಸ್ ರೈಲಿಗೆ ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಗುರುವಾರ ಬೆಳಗ್ಗೆ ಶಿವಮೊಗ್ಗ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರಯಾಣಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಬೆಳಗ್ಗೆ 5.15ಕ್ಕೆ ಶಿವಮೊಗ್ಗದಿಂದ ಹೊರಟು 10.15ಕ್ಕೆ ಯಶವಂತಪುರ ತಲುಪಲಿರುವ ಜನಶತಾಬ್ದಿ ಎಕ್ಸ್​ಪ್ರೆಸ್ ಈ ಮೊದಲು ವಾರದಲ್ಲಿ 3 ದಿನ ಸಂಚರಿಸುತ್ತಿತ್ತು. ಅದನ್ನು 6 ದಿನಗಳಿಗೆ ವಿಸ್ತರಿಸಲಾಗಿದೆ. ಮಂಗಳವಾರ ಹೊರತುಪಡಿಸಿ ವಾರದ ಎಲ್ಲ […]

ಕಡಿಮೆ ದರದಲ್ಲಿ ಬಡವರಿಗೆ ಔಷಧ ವಿತರಣೆ

ಶಿವಮೊಗ್ಗ: ಪ್ರಧಾನ ಮಂತ್ರಿ ಜನೌಷಧ ಕೇಂದ್ರಗಳ ಮೂಲಕ ಅತಿ ಕಡಿಮೆ ದರದಲ್ಲಿ ಔಷಧಗಳನ್ನು ಒದಗಿಸಲಾಗುತ್ತಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಿರುವುದು ಕೇಂದ್ರ ಸರ್ಕಾರದ ಸಾಧನೆಗಳಲ್ಲೊಂದಾಗಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು. ಜೆನರಿಕ್ ಔಷಧ ಫಲಾನುಭವಿಗಳೊಂದಿಗೆ ಪ್ರಧಾನಿ ಸಂವಾದ ಬಳಿಕ ಶಿವಮೊಗ್ಗ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಜೆನರಿಕ್ ಔಷಧ ಮಳಿಗೆಗಳಲ್ಲಿ ಕೆಲ ಔಷಧಗಳು ಶೇ.85ಕ್ಕೂ ಕಡಿಮೆ ದರದಲ್ಲಿ ದೊರೆಯುತ್ತಿವೆ. ಇದರಿಂದ ಜನರ ಆರೋಗ್ಯ ಸುಧಾರಣೆಗೆ ಒತ್ತು ನೀಡಿದಂತಾಗಿದೆ ಎಂದರು. […]

ಖ್ಯಾತ ಗಮಕಿ ಮಾರ್ಕಂಡೇಯ ಅವಧಾನಿ ನಿಧನ

ಶಿವಮೊಗ್ಗ: ಖ್ಯಾತ ಗಮಕಿ, ಕುಮಾರವ್ಯಾಸ ಪ್ರಶಸ್ತಿ ಪುರಸ್ಕೃತ ಮತ್ತೂರಿನ ಮಾರ್ಕಂಡೇಯ ಅವಧಾನಿ (86) ಬುಧವಾರ ರಾತ್ರಿ 11.30ರ ಅಂದಾಜಿಗೆ ನಿಧನರಾದರು. ಸಂಸ್ಕೃತ ಹಾಗೂ ವೇದದಲ್ಲಿ ಅಪಾರ ಪಾಂಡಿತ್ಯ ಗಳಿಸಿದ್ದ ಅವರು, ಮತ್ತೂರು-ಹೊಸಹಳ್ಳಿ ಅವಳಿ ಗ್ರಾಮಗಳ ಜನರ ಗೌರವಕ್ಕೆ ಪಾತ್ರರಾಗಿದ್ದರು. ಮೃತರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಮತ್ತೂರಿನಲ್ಲಿ ನೆರವೇರಿತು. ತಮ್ಮ ಕಂಚಿನ ಕಂಠದ ಮೂಲಕ ಗಮಕ ವ್ಯಾಖ್ಯಾನದಲ್ಲಿ ಗಮನಸೆಳೆದಿದ್ದ ಅವಧಾನಿಗಳು, ಹೊಸಹಳ್ಳಿ ಕೇಶವಮೂರ್ತಿ ಅವರೊಂದಿಗೆ ಹಲವು ವರ್ಷಗಳ ಕಾಲ ವಾಹಿನಿಯೊಂದರಲ್ಲಿ ಗಮಕ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಗಮಕಕ್ಕೆ ಹೊಸ ಆಯಾಮ […]

ಮತ್ತೆ ಮಧು ಬಂಗಾರಪ್ಪ ‘ಹರಕೆಯ ಕುರಿ’?

ಶಿವಮೊಗ್ಗ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಜೆಡಿಎಸ್ ಬೆಂಗಳೂರು: ಲೋಕಸಭೆ ಚುನಾವಣೆಗೆ ಜೆಡಿಎಸ್‌ ತನ್ನ ಮೊದಲ ಅಭ್ಯರ್ಥಿಯನ್ನು ಪ್ರಕಟಿಸಿದೆ. ಉಪಚುನಾವಣೆಯಲ್ಲಿ ಸೋತಿದ್ದ ಮಧು ಬಂಗಾರಪ್ಪ ಅವರು ಮತ್ತೊಮ್ಮೆ ಶಿವಮೊಗ್ಗದಿಂದ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಶಿವಮೊಗ್ಗ ಕ್ಷೇತ್ರಕ್ಕೆ ಮಧು ಬಂಗಾರಪ್ಪ ಅವರೇ ಜೆಡಿಎಸ್‌ ಅಭ್ಯರ್ಥಿ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಘೋಷಿಸಿದ್ದಾರೆ. ನಿನ್ನೆ ಸದಾಶಿವನಗರದಲ್ಲಿ ಮಧು ಬಂಗಾರಪ್ಪ ಅವರ ಮನೆಗೆ ತೆರಳಿ ಚರ್ಚಿಸಿದ್ದರು. ಚರ್ಚೆಯ ನಂತರ ಮಾತನಾಡಿದ ದೇವೇಗೌಡ, ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರನ್ನು […]

ರಾಜ್ಯದಿಂದ 22 ಬಿಜೆಪಿ ಸಂಸದರನ್ನು ಆರಿಸಿ ಕಳುಹಿಸುವ ತನಕ ವಿರಮಿಸಲ್ಲ: ಬಿಎಸ್‌ವೈ

ರಾಜ್ಯದಲ್ಲಿ 22 ಸೀಟನ್ನು ಬಿಜೆಪಿ ಗೆದ್ದರೆ ಸಮ್ಮಿಶ್ರ ಸರಕಾರ ಉಳಿಯಲ್ಲ ಎಂದು ಯಡಿಯೂರಪ್ಪ ಭವಿಷ್ಯ ನುಡಿದರು. ಮೋದಿ ಅವರ ಸಾಧನೆ, ಜನಪರ ಕೆಲಸಗಳನ್ನು ಮನೆಮನೆಗೆ ಮುಟ್ಟಿಸಿ, ಬೇರೆ ಪಕ್ಷದವರನ್ನು ಕರೆತನ್ನಿ, ಬೇರೆಯವರು ಬಂದರೆ ನಿಮ್ಮ ಕುರ್ಚಿ ಹೋಗುತ್ತದೆ ಎಂಬ ಭಯ ಬೇಡ ಎಂದು ಯಡಿಯೂರಪ್ಪ ಕಾರ್ಯರ್ತರಿಗೆ ಕರೆ ನೀಡಿದರು. ವಿಜಯಪುರ: ಚುನಾವಣೆ ಮುಗಿಯುವ ತನಕ ಮನೆ ಸೇರಲ್ಲ ರಾಜ್ಯದಿಂದ ಕನಿಷ್ಠ 22 ಸಂಸದರನ್ನು ಆರಿಸಿ ಕಳುಹಿಸುವ ತನಕ ವಿರಮಿಸುವುದಿಲ್ಲ ಎಂದು ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದರು. ವಿಜಯಪುರದಲ್ಲಿ […]

ಮಾ. 1ರಿಂದ 31ರವರೆಗೆ ಆಗುಂಬೆ ಘಾಟ್ ರಸ್ತೆ ಸಂಚಾರ ನಿಷೇಧ

ಶಿವಮೊಗ್ಗ, ಫೆ.23 (ಕರ್ನಾಟಕ ವಾರ್ತೆ): ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದಿರುವ ಕಡೆಗಳಲ್ಲಿ ಶಾಶ್ವತವಾಗಿ ದುರಸ್ತಿ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಮಾರ್ಚ್ 1ರಿಂದ 31ರವರೆಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದ್ದು, ಲಘು ವಾಹನಗಳಾದ ಸಾಮಾನ್ಯ ಬಸ್ಸು, ಜೀಪು, ವ್ಯಾನ್, ಎಲ್.ಸಿ.ವಿ (ಮಿನಿ ವ್ಯಾನ್), ದ್ವಿಚಕ್ರ ವಾಹನಗಳು ತೀರ್ಥಹಳ್ಳಿ-ಕೊಪ್ಪ-ಶೃಂಗೇರಿ-ಮಾಳಾಘಾಟ್-ಕಾರ್ಕಳ-ಉಡುಪಿ (ರಾಷ್ಟ್ರೀಯ ಹೆದ್ದಾರಿ 169) ಮೂಲಕ ಸಂಚರಿಸಬೇಕು. ಭಾರಿ ವಾಹನಗಳಾದ ರಾಜಹಂಸ, ಐರಾವತ ಮತ್ತು ಖಾಸಗಿ […]