ಪಾರಮ್ಯ ಮೆರೆದ ಬಿಎಸ್‌ವೈ

ಶಿವಮೊಗ್ಗ: ಮತ್ತೆ ಯಡಿಯೂರಪ್ಪ ಗೆದ್ದಿದ್ದಾರೆ. ಶಿಕಾರಿಪುರದಲ್ಲಿ ತಮ್ಮ ಹಿಡಿತ ಏನು ಎಂಬುದನ್ನು ಎಂಟನೇ ಬಾರಿ ಗೆಲ್ಲುವ ಮೂಲಕ ಸಂದೇಶವೊಂದನ್ನು ರವಾನಿಸಿದ್ದಾರೆ. ತಾವು ಮಾತ್ರವಲ್ಲ, ಜಿಲ್ಲೆಯಲ್ಲಿ ದೊಡ್ಡ ತಂಡದೊಂದಿಗೆ ಅರ್ಹ ಗೆಲುವು ಸಾಧಿಸಿದ್ದಾರೆ. 1983ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ ಯಡಿಯೂರಪ್ಪ ಮತ್ತೆ ಹಿಂದೆ ತಿರುಗಿ ನೋಡಲೇ ಇಲ್ಲ. 1999ರಲ್ಲಿ ಮೊದಲ ಸೋಲನ್ನು ಅನುಭವಿಸಿದರು. ಬಳಿಕ ನಡೆದ ಎಲ್ಲ ಚುನಾವಣೆ  ಗಳಲ್ಲಿಯೂ ಅವರು ಗೆಲುವನ್ನು ದಾಖಲಿಸುತ್ತಲೇ ಬಂದಿದ್ದಾರೆ. 2008ರಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಸಂದರ್ಭ ಭದ್ರಾವತಿ ಹೊರತುಪಡಿಸಿ ಎಲ್ಲ ಆರು […]

ಕಾವೇರಿ ಸ್ಕೀಂ ಕುರಿತ ಅಂತಿಮ ಆದೇಶಕ್ಕೆ ತಡೆ ನೀಡುವಂತೆ ಮನವಿ: ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ನವದೆಹಲಿ; ರಾಜ್ಯ ವಿಧಾನಸಭೆ ಅತಂತ್ರ ಸ್ಥಿತಿಯಲ್ಲಿರುವುದರಿಂದ ನೂತನ ಸರ್ಕಾರ ರಚನೆಯಾಗುವವರೆಗೂ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತ ಅಂತಿಮ ಆದೇಶಕ್ಕೆ ತಡೆ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಬುಧವಾರ ತಿರಸ್ಕರಿಸಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿದ್ದ ಪೀಠ ಅರ್ಜಿಯನ್ನು ತಿರಸ್ಕರಿಸಿದ್ದು, ಕರಡು ಯೋಜನೆ ಸಿದ್ಧಪಡಿಸಿರುವುದು ಕೇಂಗ್ರ ಸರ್ಕಾರವೇ, ಹೊರತು ರಾಜ್ಯ ಸರ್ಕಾರಗಳಲ್ಲ ಎಂದು ಹೇಳಿದೆ. ದಕ್ಷಿಣ ರಾಜ್ಯಗಳಾದ ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಪುದುಚೇರಿ ರಾಜ್ಯಗಳ ನಡುವೆ ಕಾವೇರಿ ನೀರು […]

ಕಾರಿನಲ್ಲಿ ವಿ.ವಿ.ಪ್ಯಾಟ್‌ ಚೀಟಿ: ಆರೋಪಿ ಪೊಲೀಸ್ ವಶಕ್ಕೆ

ಮೈಸೂರು: ವೆಂಕಟೇಶ್ ಎಂಬವರ ಕಾರಿನಲ್ಲಿ ವಿ.ವಿ. ಪ್ಯಾಟ್‌ನ ಚೀಟಿಗಳು ಪತ್ತೆಯಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನರಸಿಂಹರಾಜ, ಕೃಷ್ಣರಾಜ ಹಾಗೂ ಚಾಮರಾಜ ಕ್ಷೇತ್ರಗಳಲ್ಲಿ ವೆಂಕಟೇಶ್ ಮತ್ತು ನಾಲ್ವರ ತಂಡ ಹ್ಯಾಕಿಂಗ್ ಮಾಡಿರುವ ಆರೋಪ ಕೇಳಿ ಬಂದಿದೆ. ವಿಜಯನಗರದ ಐಶ್ವರ್ಯ ಪೆಟ್ರೋಲ್ ಬಂಕ್ ಬಳಿ ಆರೋಪಿಗಳು ಸಿಕ್ಕಿಬಿದ್ದಿದ್ದು, ಸೂಕ್ತ ಕ್ರಮ ಜರುಗಿಸುವಂತೆ ನರಸಿಂಹರಾಜ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಬ್ದುಲ್ಲಾ ಮನವಿ ಮಾಡಿದ್ದಾರೆ.

ಕಾಂಗ್ರೆಸ್‌ – JDSಗೆ ಮುಖಭಂಗ ; BSY ಪ್ರಮಾಣ ವಚನ ನಿರ್ವಿಘ್ನ

ನವದೆಹಲಿ: ಇಂದು ಬೆಳಗ್ಗೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಬಿ.ಜೆ.ಪಿ.ಯ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಅವರ ಪ್ರಮಾಣವಚನ ಸಮಾರಂಭಕ್ಕೆ ತಡೆ ನೀಡಬೇಕೆಂದು ಕೋರಿ ಕಾಂಗ್ರೆಸ್‌ ಮತ್ತು ಜೆ.ಡಿ..ಎಸ್‌. ಜಂಟಿಯಾಗಿ ಸುಪ್ರೀಂ ಕೋರ್ಟ್‌ ಗೆ ಸಲ್ಲಿಸಿದ್ದ ತುರ್ತು ಅರ್ಜಿಯ ವಿಚಾರಣೆ ನಡೆಸಿದ ಜಸ್ಟೀಸ್‌ ಸಿಕ್ರಿ, ಜಸ್ಟೀಸ್‌ ಭೂಷಣ್‌, ಜಸ್ಟೀಸ್‌ ಬೋಬ್ದೆ ಇವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ಈ ಅರ್ಜಿಯನ್ನು ತಿರಸ್ಕರಿಸಿ ಪ್ರಮಾಣವಚನ ಸಮಾರಂಭಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ರಾಜ್ಯಪಾಲರ ಆದೇಶಕ್ಕೆ […]

ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಬಿಎಸ್ ಯಡಿಯೂರಪ್ಪ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಗುರುವಾರ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರೆ, ಮತ್ತೊಂದೆಡೆ ಬಿಎಸ್ ವೈ ಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಿದ ರಾಜ್ಯಪಾಲ ವಜೂಬಾಯಿ ವಾಲಾ ಅವರ ಕ್ರಮವನ್ನು ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಸಿ ವೇಣುಗೋಪಾಲ್,ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಅಜಾದ್, ಪರಮೇಶ್ವರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಧರಣಿ ನಡೆಸುತ್ತಿದ್ದಾರೆ. ಸರ್ಕಾರ ರಚಿಸಲು ಬಿಜೆಪಿಗೆ ಆಹ್ವಾನ ಮತ್ತು […]

ಕರ್ನಾಟಕ ರಾಜ್ಯಪಾಲರ ನಿರ್ಧಾರ: ಜೇಠ್ಮಲಾನಿ ಸುಪ್ರೀಂ ಕೋರ್ಟಿಗೆ

ಹೊಸದಿಲ್ಲಿ : ಕರ್ನಾಟಕದಲ್ಲಿ ಬಹುಮತ ಇಲ್ಲದ ಬಿಜೆಪಿಯನ್ನು ಸರಕಾರ ರಚಿಸುವಂತೆ ಕೇಳಿರುವ ರಾಜ್ಯಪಾಲರ ನಿರ್ಧಾರವು ಸಾಂವಿಧಾನಿಕ ಅಧಿಕಾರದ ಸಂಪೂರ್ಣ ದುರಪಯೋಗವಾಗಿದೆ ಎಂದಿರುವ ಹಿರಿಯ ನ್ಯಾಯವಾದಿ ಮತ್ತು ಕಾನೂನು ಪರಿಣತ ರಾಮ್‌ ಜೇಠ್ಮಲಾನಿ ಅವರು ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ವೈಯಕ್ತಿಕ ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಮೆಟ್ಟಲೇರಿದ್ದಾರೆ. ಜೇಠ್ಮಲಾನಿ ಅವರ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ ವರಿಷ್ಠ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಪೀಠ, ನಾಳೆ ಇದೇ ವಿಷಯಕ್ಕೆ ಸಂಬಂಧಿಸಿ ಮತ್ತೆ ಸೇರಲಿರುವ ಮೂವರು ನ್ಯಾಯಮೂರ್ತಿಗಳ ವಿಶೇಷ ಪೀಠವು ಈ ಅರ್ಜಿಯನ್ನು […]

ಎಸ್ಸಿ,ಎಸ್ಟಿ: ಸುಪ್ರೀಂ ಸಮರ್ಥನೆ

ಹೊಸದಿಲ್ಲಿ: ಎಸ್ಸಿ,ಎಸ್ಟಿ ಕಾಯ್ದೆಯ ದುರುಪಯೋಗಕ್ಕೆ ಪರೋಕ್ಷ ಅನುಕೂಲ ಕಲ್ಪಿಸುವುದು ಈ ದೇಶದ ಸಂಸತ್ತಿಗೂ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಖಡಕ್ಕಾಗಿ ಹೇಳಿದೆ. ಮಾ. 20ರಂದು ಎಸ್ಸಿ, ಎಸ್ಟಿ ಕಾಯ್ದೆಯಲ್ಲಿ ತಿದ್ದುಪಡಿ ಮಾಡಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪಿನ ವಿರುದ್ಧ ಮೇಲ್ಮ ನವಿ ಸಲ್ಲಿಸಿರುವ ಕೇಂದ್ರ ಸರಕಾರ, ಜನರ ಒಳಿತಾಗಿ ಸರಕಾರ ರೂಪಿಸುವ ಕಾನೂನುಗಳಲ್ಲಿ ನ್ಯಾಯಾಂಗವು ಹಸ್ತ ಕ್ಷೇಪ ಮಾಡುವಂತಿಲ್ಲ ಎಂದು ವಾದಿಸಿತ್ತು. ಈ ವಾದಕ್ಕೆ ಗುರುವಾರ, ನ್ಯಾಯಮೂರ್ತಿಗಳಾದ ಆದರ್ಶ್‌ ಗೋಯೆಲ್‌ ಮತ್ತು ಯು.ಯು.ಲಲಿತ್‌ ಅವರುಳ್ಳ ನ್ಯಾಯ ಪೀಠ, “”ಕಾಯ್ದೆಗಳಡಿ, ಒಬ್ಬ ನಿರ್ದೋಷಿಯನ್ನು […]

ರೈತರ ಸಾಲಮನ್ನಾ ಬಗ್ಗೆ 2 ದಿನದೊಳಗೆ ಘೋಷಣೆ; ಬಿಎಸ್ ಯಡಿಯೂರಪ್ಪ

ಬೆಂಗಳೂರು: ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್ ಗಳ, ನೇಕಾರರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದೇವೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿ ಜೊತೆ ಚರ್ಚಿಸಿದ್ದೇನೆ, ನಾಳೆ ಈ ಸಂಬಂಧ ದಾಖಲೆ ಪರಿಶೀಲಿಸಿ 2 ದಿನದೊಳಗೆ ನಿರ್ಧಾರ ಘೋಷಿಸುವುದಾಗಿ ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬಿಎಸ್ ಯಡಿಯೂರಪ್ಪ ಅಧಿಕಾರ ವಹಿಸಿಕೊಂಡ ಒಂದೂವರೆ ಗಂಟೆಯಲ್ಲೇ ರೈತರ ಸಾಲಮನ್ನಾ ಮಾಡಿರುವುದಾಗಿ ಖಾಸಗಿ ಮಾಧ್ಯಮಗಳು ವರದಿ ಪ್ರಕಟಿಸಿದ್ದವು. ಗುರುವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿ […]

ವಿಧಾನಸೌಧದ ಬಳಿ ಪ್ರತಿಭಟನೆ: ಜೆಡಿಎಸ್‌ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ರಾಜ್ಯಪಾಲ ವಜುಭಾಯಿ ವಾಲ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಧಾನಸೌಧದ ಪಶ್ಚಿ‌ಮ ಗೇಟ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌. ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರಿಗೆ ಸ್ಥಳದಿಂದ ತೆರಳಲು ಪೊಲೀಸರು ಸೂಚನೆ ನೀಡಿದರು. ಆದರೆ,‌ ಇದನ್ನು ನಿರಾಕರಿಸಿದ ಪ್ರತಿಭಟನಾಕಾರರು ಪ್ರತಿಭಟನೆ ತೀವ್ರಗೊಳಿಸಿದರು. ನಂತರ, ಪ್ರತಿಭಟನಾನಿರತರನ್ನು ವಶಕ್ಕೆ ಪಡೆದ ಪೊಲೀಸರು ಅವರನ್ನು ಬಿಎಂಟಿಸಿ ಬಸ್‌ನಲ್ಲಿ ಅಲ್ಲಿಂದ ಕರೆದೊಯ್ಯಲಾಗಿದೆ. ಈ ಮಧ್ಯೆ, ಅಲ್ಲಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದ್ದಾರೆ.

ಯಡಿಯೂರಪ್ಪ ಪ್ರಮಾಣವಚನ ಪ್ರಜಾಪ್ರಭುತ್ವದ ಅಣಕ: ರಾಹುಲ್ ಗಾಂಧಿ

ನವದೆಹಲಿ: ಬಹುಮತವಿಲ್ಲದಿದ್ದರೂ ಬಿ.ಎಸ್‌.ಯಡಿಯೂರಪ್ಪನವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವುದು ಪ್ರಜಾಪ್ರಭುತ್ವದ ಅಣಕವಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಇವತ್ತು ಬೆಳಿಗ್ಗೆ ಬಿಜೆಪಿ ಗೆಲುವಿನ ಸಂಭ್ರಮಾಚರಣೆ ಮಾಡುತ್ತಿದ್ದರೆ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಸೋಲಿಗಾಗಿ ದೇಶ ಶೋಕಿಸುತ್ತಿತ್ತು ಎಂದು ಅವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಜತೆಗೆ, ಛತ್ತೀಸ್‌ಗಡದ ರಾಯಪುರದಲ್ಲಿ ಮಾತನಾಡಿದ ಅವರು, ದೇಶದ ಎಲ್ಲ ಸಂಸ್ಥೆಗಳ ಮೇಲೆ ಆರ್‌ಎಸ್‌ಎಸ್‌ ಹಿಡಿತ ಸಾಧಿಸುತ್ತಿದೆ ಎಂದು ಆರೋಪಿಸಿದ್ದಾರೆ.