ಯಾರಿಂದಲೂ ಊಹಿಸಲಾಗದಷ್ಟು ಬಹುಮತ ಸಾಬೀತುಪಡಿಸುತ್ತೇವೆ: ಶ್ರೀರಾಮುಲು

ಬೆಂಗಳೂರು: ಬಿಜೆಪಿ ಈಗ ಸರ್ಕಾರ ರಚಿಸಿ, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಬಿಜೆಪಿ ಯಾರೂ ಊಹಿಸಲಾಗದಷ್ಟು ಸಂಖ್ಯೆಯಲ್ಲಿ ಬಹುಮತ ಸಾಬೀತು ಮಾಡಲಿದೆ ಎಂದು ಶಾಸಕ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು. ಗುರುವಾರ ನಗರದಲ್ಲಿ ಸಿಎಂ ಪ್ರಮಾಣವಚನ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಅತ್ಯಂತ ವಿಶ್ವಾಸದಿಂದಲೇ ಮಾತನಾಡಿದ ಅವರು, ಸಿದ್ದರಾಮ್ಯಯ ಅವರು ಬೇರೆ ದಾರಿಯಲ್ಲಿ ಅಧಿಕಾರ ಹಿಡಿಯಲು ಹವಣಿಕೆ ಮಾಡುತ್ತಿದ್ದಾರೆ. ಸರ್ಕಾರ ಅಧಿಕಾರದಲ್ಲಿದ್ದಾಗ ಜನಪರವಾದ ಯಾವ ಕೆಲಸವನ್ನೂ ಅವರು ಮಾಡಿಲ್ಲ ಎಂದರು. ಬಿಜೆಪಿ ಅಧಿಕಾರ ಮಾಡಲು ಜನ ಆದೇಶ […]

ದೇವರು, ರೈತರ ಹೆಸರಿನಲ್ಲಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಅವರು ಹಸಿರು ಶಾಲು ಹೊದ್ದು ಗುರುವಾರ ಪ್ರಮಾಣವಚನ ಸ್ವೀಕರಿಸಿದರು. ದೇವರು ಮತ್ತು ರೈತರ ಹೆಸರಿನಲ್ಲಿ ಅವರು ಪ್ರಮಾಣ ಸ್ವೀಕರಿಸಿದರು. ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಹೂಗುಚ್ಚ ನೀಡುವ ಮೂಲಕ ಯಡಿಯೂರಪ್ಪ ಅವರಿಗೆ ವಜುಭಾಯಿ ವಾಲ ಅವರು ಶುಭ ಕೋರಿದರು. ಈ ಮೂಲಕ ಯಡಿಯೂರಪ್ಪ ಅವರು 23ನೇ ಮುಖ್ಯಮಂತ್ರಿಯಾಗಿ ಹಾಗೂ ಮೂರನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿದರು.

ಯಡಿಯೂರಪ್ಪ ಪ್ರಮಾಣವಚನಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ: ಹಸ್ತಕ್ಷೇಪ ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್‌

ನವದೆಹಲಿ: ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನಕ್ಕೆ ತಡೆ ಕೋರಿ ಕಾಂಗ್ರೆಸ್ ಮತ್ತು ಜೆಡಿಎಸ್‌ ಪಕ್ಷ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಬುಧವಾರ ಮಧ್ಯರಾತ್ರಿ ವಿಚಾರಣೆ ನಡೆಸಿದ್ದು ರಾಜ್ಯಪಾಲರ ಕರ್ತವ್ಯದಲ್ಲಿ ಕೋರ್ಟ್ ಹಸ್ತಕ್ಷೇಪ ಸಾಧ್ಯವಿಲ್ಲ ಎಂದು ಸುಪ್ರೀಕೋರ್ಟ್ ಅಭಿಪ್ರಾಯಪಟ್ಟಿದೆ. ಕರ್ನಾಟಕದಲ್ಲಿ ಸರ್ಕಾರ ರಚಿಸಲು ಬಿಜೆಪಿಗೆ ಆಹ್ವಾನ ನೀಡಿರುವ ರಾಜ್ಯಪಾಲರ ನಿರ್ಧಾರ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಬುಧವಾರ ಮಧ್ಯರಾತ್ರಿ ನಡೆಸಿತು. ಸುಪ್ರೀಂ ಕೋರ್ಟ್‌ನ ಕೊಠಡಿ ಸಂಖ್ಯೆ 6ರಲ್ಲಿ ಮಧ್ಯರಾತ್ರಿ 1.45ಕ್ಕೆ ನ್ಯಾಯಮೂರ್ತಿಗಳಾದ ಎ.ಕೆ.ಸಿಕ್ರಿ, […]

ಗೌಡರ ಕೋಟೆ ಭೇದಿಸಲು ರಣತಂತ್ರ

ಹಾಸನ: ‘ಹೊಳೆನರಸೀಪುರದಲ್ಲಿ ದೇವೇಗೌಡರ ಮಕ್ಕಳು ಗೆದ್ದಿದ್ದು ಸಾಕು’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯಿಂದ ರಾಜ್ಯದ ಗಮನ ಸೆಳೆದಿರುವ ಹೊಳೆನರಸೀಪುರ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಸಕ್ತಿ ವಹಿಸಿ ಕಣಕ್ಕಿಳಿಸಿರುವ ಸರ್ಕಾರಿ ನಿವೃತ್ತ ಅಧಿಕಾರಿ, ಕಾಂಗ್ರೆಸ್ ಅಭ್ಯರ್ಥಿ ಬಿ.ಪಿ.ಮಂಜೇಗೌಡರಿಗೆ ಕ್ಷೇತ್ರದಲ್ಲಿ ಬಲವಾಗಿ ಬೇರು ಬಿಟ್ಟಿರುವ ಜೆಡಿಎಸ್ ಅಭ್ಯರ್ಥಿ ರೇವಣ್ಣ ದೊಡ್ಡ ಸವಾಲಾಗಿದ್ದಾರೆ. ಬಿಜೆಪಿಯಿಂದ ಹೊಸ ಮುಖ ಎಂ.ಎನ್.ರಾಜು ಕಣಕ್ಕಿಳಿದಿದ್ದಾರೆ. ಈ ವರೆಗೂ ನಡೆದಿರುವ 13 ಚುನಾವಣೆಗಳಲ್ಲಿ ದೇವೇಗೌಡರು ಆರು ಹಾಗೂ ಅವರ ಪುತ್ರ ಎಚ್.ಡಿ.ರೇವಣ್ಣ ನಾಲ್ಕು […]

52 ಚಿನ್ನದ ಬಿಸ್ಕತ್ತು ವಶ: ಇಬ್ಬರು ಮ್ಯಾನ್‌ಮಾರ್‌ ಪ್ರಜೆಗಳು ಅರೆಸ್ಟ್

ಐಜಾಲ್‌ : ಕಸ್ಟಮ್ಸ್‌ ಅಧಿಕಾರಿಗಳು ಮಿಜೋರಾಂ ನಲ್ಲಿ ಇಬ್ಬರು ಮ್ಯಾನ್ಮಾರ್‌ ಪ್ರಜೆಗಳನ್ನು ಬಂಧಿಸಿ ಅವರ ಬಳಿ ಇದ್ದ ಸುಮಾರು 2.69 ಕೋಟಿ ರೂ. ಮೌಲ್ಯದ 52 ಚಿನ್ನದ ಬಿಸ್ಕತ್ತುಗಳನ್ನು ವಶಕ್ಕೆ ತೆಗೆದುಕೊಂಡರು. ಕಸ್ಟಮ್ಸ್‌ ಅಧಿಕಾರಿಗಳು ತಮಗೆ ದೊರಕಿದ ಖಚಿತ ಮಾಹಿತಿಯನ್ನು ಅನುಸರಿಸಿ ಕಸ್ಟಮ್ಸ್‌ check gateನಲ್ಲಿ ಶಂಕಿತ ಕಾರನ್ನು ತಡೆದು ನಿಲ್ಲಿಸಿ ಶೋಧಿಸಿದಾಗ ಅದರೊಳಗಿದ್ದ ಇಬ್ಬರ ವ್ಯಕ್ತಿಗಳ ಬಳಿ 8 ಕಿಲೋ ತೂಕದ 52 ಚಿನ್ನದ ಬಿಸ್ಕತ್ತುಗಳಿದ್ದುದು ಪತ್ತೆಯಾಯಿತು ಎಂದು ಕಳ್ಳಸಾಗಣೆ ನಿಗ್ರಹ ದಳದ SP ತಿಳಿಸಿದರು. […]

4 ಲವರ್‌ಗಳ ನೆರವಿನಲ್ಲಿ ಪತಿಯ ಕೊಂದು 3 ತುಂಡು ಮಾಡಿದ ಗೋವಾ ಮಹಿಳೆ

ಮಾರ್ಗೋವಾ/ಕ್ವೆಪೆ : ಕರ್ನಾಟಕದ ಬೈಲಹೊಂಗಲದ 38ರ ಹರೆಯದ ತನ್ನ ಪತಿ ಬಸವರಾಜ್‌ ಬಾರಿಕಿ ಎಂಬಾತನನ್ನು ಸ್ಕೆಚ್‌ ಹಾಕಿ ಕುಚೋರಿಂ ನಲ್ಲಿ ಫ್ಲಾಟ್‌ ಒಂದರಲ್ಲಿ ಕೊಲೆಗೈದ ಆರೋಪದ ಮೇಲೆ 30ರ ಹರೆಯದ ಕಲ್ಪನಾ ಬಾರಿಕಿ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪತಿಯನ್ನು ಕೊಂದ ಬಳಿಕ ಆತನ ಮೃತ ದೇಹವನ್ನು ಪತ್ನಿ ಕಲ್ಪನಾ ತನ್ನ ನಾಲ್ವರು ಲವ್ವರ್‌ ಗಳ ನೆರವಿನಲ್ಲಿ ಮೂರು ತುಂಡು ಮಾಡಿ ಗೋಣಿ ಚೀಲದಲ್ಲಿ ಅವುಗಳನ್ನು ತುಂಬಿ ಗೋವಾ-ಕರ್ನಾಟಕ ಗಡಿಯಲ್ಲಿನ ಅನ್‌ಮೋಡ್‌ ಘಾಟ್‌ ಪ್ರದೇಶದ ಮೂರು ವಿಭಿನ್ನ […]

ತಾಕತ್ತಿದ್ದರೆ ಸಂವಿಧಾನ ಮುಟ್ಟಿ ನೋಡಿ: ಬಿಜೆಪಿಗೆ ರಾಹುಲ್‌ ಗಾಂಧಿ ಸವಾಲು

ಬೆಂಗಳೂರು: ‘ಸಂವಿಧಾನ ಬದಲಿಸುವ ಮಾತಿರಲಿ, ತಾಕತ್ತಿದ್ದರೆ ಸಂವಿಧಾನ ಮುಟ್ಟಿ ನೋಡಿ’ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಬಿಜೆಪಿಗೆ ಸವಾಲು ಹಾಕಿದರು. ‘ಕೇಂದ್ರ ಸಚಿವರೊಬ್ಬರು ಸಂವಿಧಾನ ಬದಲಿಸುವುದಾಗಿ ಹೇಳಿದ್ದಾರೆ. ಅದನ್ನು ಕೇಳಿಯೂ ನರೇಂದ್ರ ಮೋದಿ ಸುಮ್ಮನಿದ್ದಾರೆ. ಆರ್‍ಎಸ್‍ಎಸ್, ಬಿಜೆಪಿ, ಮೋದಿ… ಯಾರೇ ಬಂದರೂ ಸಂವಿಧಾನ ಮುಟ್ಟಲು ಬಿಡುವುದಿಲ್ಲ. ಇಷ್ಟು ಹೇಳಿದ ಮೇಲೂ ಬದಲಾಗದಿದ್ದರೆ, ಒಮ್ಮೆ ಮುಟ್ಟಿ ನೋಡಿ. ಮುಂದೆ ಏನು ಮಾಡುತ್ತೇವೆ ಗೊತ್ತಾಗುತ್ತದೆ’ ಎಂದು ಗುಡುಗಿದರು. ಶಿವಾಜಿನಗರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಆರ್‌ಎಸ್‌ಎಸ್‌ ಈ […]

ಬರೀ ಹಗಲುಗನಸು: ಶಾ ಟೀಕೆ

ತುಮಕೂರು: ‘ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ರಾಹುಲ್ ಬಾಬಾ ಹಗಲುಗನಸು (ದಿನ್ ಕಾ ಸಪ್ನಾ) ಕಾಣುತ್ತಿದ್ದಾರೆ’ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಟೀಕಿಸಿದರು. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೆಬ್ಬೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸುರೇಶ್‌ ಗೌಡ ಅವರ ಪರ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಬುಧವಾರ ಮಾತನಾಡಿದರು. ‘ರಾಹುಲ್ ಗಾಂಧಿಯವರೇ, ದೇಶದಲ್ಲಿ 2014ರ ನಂತರ ನಡೆದ ಚುನಾವಣೆಗಳನ್ನು ಒಮ್ಮೆ ತಿರುಗಿ ನೋಡಿ. […]

ವಾಲ್‌ ಮಾರ್ಟ್‌ ಡೀಲ್‌: ಕೋಟ್ಯಧಿಪತಿಗಳಾದ ಫ್ಲಿಪ್‌ಕಾರ್ಟ್ ಉದ್ಯೋಗಿಗಳು

ಬೆಂಗಳೂರು: ದೇಶದ ಅತಿದೊಡ್ಡ ಇ- ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನ ಶೇ. 77ರಷ್ಟು ಷೇರುಗಳನ್ನು ಅಮೆರಿಕದ ವಾಲ್‌ಮಾರ್ಟ್ ಸಂಸ್ಥೆ ಖರೀದಿಸಿದೆ. ಹೀಗಾಗಿ ಫ್ಲಿಪ್‌ಕಾರ್ಟ್‌ ಸಂಸ್ಥೆಯ ಸಾವಿರಾರು ಷೇರುದಾರರು ಕೋಟ್ಯಧಿಪತಿಗಳು ಅಥವಾ ಡಾಲರ್ ಮಿಲಿಯನೇರ್‌ಗಳಾಗಲಿದ್ದಾರೆ. ಫ್ಲಿಪ್‌ಕಾರ್ಟ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳು ಹಾಗೂ ಮಾಜಿ ಉದ್ಯೋಗಿಗಳು ಶ್ರೀಮಂತರಾಗಲಿದ್ದಾರೆ. ಯಾಕೆಂದ್ರೆ, 1 ಷೇರಿಗೆ 150 ಡಾಲರ್ ಅಂದ್ರೆ 10 ಸಾವಿರ ರೂ. ಷೇರು ಮೌಲ್ಯದಂತೆ ಷೇರುಗಳನ್ನು ವಾಪಸ್ ಕೊಂಡುಕೊಳ್ಳಲಾಗುವುದು ಎಂದು ಫ್ಲಿಪ್‌ಕಾರ್ಟ್‌ ಗ್ರೂಪ್ ಸಿಇಒ ಬಿನ್ನಿ ಬನ್ಸಾಲ್ ಘೋಷಿಸಿದ್ದಾರೆ. ಫ್ಲಿಪ್‌ಕಾರ್ಟ್‌ ಕಂಪನಿಯಲ್ಲಿ […]

ಬಿಜೆಪಿ ನಾಯಕರ ಮಾತುಗಳು ಕಾಮಿಡಿ ಶೋ ಇದ್ದಂತೆ: ಸಿದ್ದರಾಮಯ್ಯ

ಬೆಂಗಳೂರು: ಆಧಾರ ರಹಿತ ಆರೋಪ ಮಾಡುವ ಬಿಜೆಪಿ ನಾಯಕರ ಮಾತುಗಳು ಕಾಮಿಡಿ ಶೋ ರೀತಿ ಭಾಸವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಯಾವುದೇ ಒಂದು ವಿಷಯದ ಮೇಲೆ ಮಾತನಾಡುವುದಿಲ್ಲ. ವೈಯಕ್ತಿಕವಾಗಿ ಅಟ್ಯಾಕ್ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿಯವರು ಹೇಗೆ ನಡೆದುಕೊಂಡರು ಎಂದು ಹೇಳುವುದಿಲ್ಲ ಎಂದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹಾಗೂ ಮಲ್ಲಿಕಾರ್ಜುನ್ ಖರ್ಗೆ ನನ್ನ ಮೇಲೆ ಅಟ್ಯಾಕ್ […]