ಸುಮಲತಾ ತೆಗೆದುಕೊಳ್ಳುವ ಸ್ಪಷ್ಟ ನಿರ್ಧಾರದ ಬಳಿಕ ಬಿಜೆಪಿ ತನ್ನ ನಿಲುವು ಪ್ರಕಟಿಸಲಿದೆ: ಬಿಎಸ್​ವೈ

ಗದಗ: ಮಂಡ್ಯ ರಾಜಕೀಯ ವಿಚಾರದಲ್ಲಿ ನಟಿ ಸುಮಲತಾ ಅಂಬರೀಷ್​ ಅವರು ತೆಗೆದುಕೊಳ್ಳುವ ಮೂಲಕ ಸ್ಪಷ್ಟ ನಿರ್ಧಾರದ ಬಳಿಕ ಬಿಜೆಪಿ ತನ್ನ ನಿಲುವು ಪ್ರಕಟಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಅವರು ತಿಳಿಸಿದರು. ಗದಗಿನಲ್ಲಿ ಗುರುವಾರ ನಡೆದ ಬಿಜೆಪಿ ವಿಜಯಸಂಕಲ್ಪ ಯಾತ್ರಾ ಕಾರ್ಯಕ್ರಮಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅಬರು ದಿವಂಗತ ಅಂಬರೀಷ್​ ಅವರು ಮಂಡ್ಯ ಜನರ ಮನ ಗೆದ್ದ ನಾಯಕ. ಅವರ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆ ಶೋಭೆ ತರುವಂತದಲ್ಲ. ಪುತ್ರ ನಿಖಿಲ್ ಕುಮಾರ್​ಗೆ ಅಡ್ಡಿಯಾಗುತ್ತದೆ […]

ಯುವಶಕ್ತಿ ರಾಷ್ಟ್ರದ ಶಕ್ತಿ : ಬಿ.ವೈ.ರಾಘವೇಂದ್ರ

ಶಿಕಾರಿಪುರ: ಭಾರತ ವಿಶ್ವದಲ್ಲಿ ಅತಿಹೆಚ್ಚು ಯುವಶಕ್ತಿಯನ್ನು ಹೊಂದಿರುವ ರಾಷ್ಟ್ರ. ಯುವಶಕ್ತಿ ರಾಷ್ಟ್ರದ ಶಕ್ತಿ. ದೇಶದ ಅಭಿವೃದ್ಧಿಯ ಹಾದಿಯಲ್ಲಿ ಯುವಕರ ಪಾತ್ರ ಹಿರಿದು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಕಾಂಪೌಂಡ್ ನಿರ್ವಣಕ್ಕೆ ಶಂಕುಸ್ಥಾಪನೆ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿ, ಯುವಕರು ರಾಷ್ಟ್ರೀಯ ಚಿಂತನೆಗಳ ಕಡೆಗೆ ಗಮನಹರಿಸುವುದು ಒಳ್ಳೆಯದು. ರಾಷ್ಟ್ರಕ್ಕಾಗಿ ನಾವು ಎಂಬ ಕಲ್ಪನೆ ಬರಬೇಕು ಎಂದರು. ಕಾಲೇಜು ಕ್ಯಾಂಪಸ್​ಗೆ ಸರಿಯಾದ ಭದ್ರತೆ ಇರಲಿಲ್ಲ. ಪ್ರಾಚಾರ್ಯರು ಈ ಬಗ್ಗೆ […]

ಮಂಡ್ಯ ಕ್ಷೇತ್ರ ಜೆಡಿಎಸ್ ಗೆ: ಡಿಕೆಶಿ ಬಾಂಬ್ ಗೆ ‘ಕೈ’ ನಾಯಕರಲ್ಲಿ ಇರುಸು-ಮುರುಸು

ಸುಮಲತಾ ಆಸೆಗೆ ಎಳ್ಳುನೀರು? ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿರುವ ಬೆನ್ನಲ್ಲೇ, ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಬಾಂಬ್ ಸಿಡಿಸಿದ್ದಾರೆ, ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್ ಮಂಡ್ಯ ಲೋಕಸಭೆ ಕ್ಷೇತ್ರ ಸಂಬಂಧಿಸಿದಂತೆ ಬೇರೆಯೇ ನಿರ್ಣಯ ಆಗಿದೆ, ಮಂಡ್ಯದ ಎಲ್ಲಾ ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರಿದ್ದಾರೆ, ಹೀಗಾಗಿ ಮಂಡ್ಯವನ್ನು ಜೆಡಿಎಸ್ ಗೆ ಬಿಟ್ಟುಕೊಡಲಿದ್ದೇವೆ ಎಂದು ಹೇಳಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ […]

 ಜಿಲ್ಲಾ ರಕ್ಷಣಾಧಿಕಾರಿಯಾಗಿ ಡಾ. ಅಶ್ವಿನಿ ಅಧಿಕಾರ ಸ್ವೀಕಾರ

ಶಿವಮೊಗ್ಗ : ಜಿಲ್ಲಾ ರಕ್ಷಣಾಧಿಕಾರಿಯಾಗಿ ಡಾ. ಅಶ್ವಿನಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಇಲ್ಲಿನ ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ನಿಕಟಪೂರ್ವ ಎಸ್‌ಪಿ ಅಭಿನವ್‌ ಖರೆ ಅವರು ಅಶ್ವಿನಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಅಶ್ವಿನಿ ಅವರು, ಶಿವಮೊಗ್ಗ ಜಿಲ್ಲೆ ಸಾಹಿತ್ಯ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚಿದ್ದು, ಇವುಗಳನ್ನು ನಿಯಂತ್ರಿಸುವುದೇ ನನ್ನ ಮೊದಲ ಆದ್ಯತೆ ಎಂದು ಖಡಕ್‌ ಆಗಿ ಹೇಳಿದರು. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದೇ ಮೊದಲ ಗುರಿಯಾಗಿದೆ. ಇದಕ್ಕಾಗಿ ಸಾರ್ವಜನಿಕರಿಂದಲೂ […]